ಮೈಸೂರು

ಮಹಾರಾಣಿ ಕಾಲೇಜಿನ ವಿವಿಧ ಚಟುವಟಿಕೆಗಳಿಗೆ ಸಿಎಂ ಚಾಲನೆ

ಮೈಸೂರು,ಸೆ.10 : ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 2018-19ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ. ಎನ್.ಎಸ್.ಎಸ್. ಅನಾವರಣ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸೆ.11ರಂದು ಬೆಳಗ್ಗೆ 11.30ಕ್ಕೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಸಚಿವ ಸಿ.ಎಸ್.ಪುಟ್ಟರಾಜು ಇರಲಿದ್ದಾರೆ. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ವಾಸು, ಮೈವಿವಿಯ ವಿಶ‍್ರಾಂತ ಕುಲಪತಿ ಪ್ರೊ.ರಂಗಪ್ಪ ಇರುವರು. ಕವಿಯತ್ರಿ ಡಾ.ಲತಾ ರಾಜಶೇಖರ್ ಭಾಷಣಕಾರರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

 

Leave a Reply

comments

Related Articles

error: