ದೇಶಪ್ರಮುಖ ಸುದ್ದಿ

ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಮೇಲಿನ ಸೆಸ್ ಇಳಿಕೆ?

ನವದೆಹಲಿ (ಸೆ.10): ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ದ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಈ ನಡುವೆ ರಾಜ್ಯ ಪೆಟ್ರೋಲಿಯಂ ಉತ್ಪನಗಳ ಮೇಲೆ ರಾಜ್ಯ ಸರ್ಕಾರಗಳು ಹಾಕುತ್ತಿರುವ ಸೆಸ್ ಅನ್ನು ಕಡಿಮೆ ಮಾಡಿದರೆ, ಪೆಟ್ರೋಲಿಯಂ ಉತ್ಪನಗಳ ಬೆಲೆಯಲ್ಲಿ ಕಡಿಮೆಯಾಗಲಿದೆ ಎನ್ನುತ್ತಿದ್ದಾರೆ ಆರ್ಥಿಕ ತಜ್ಞರು.

ಈ ನಡುವೆ ಈ ಬಗ್ಗೆ ರಾಜ್ಯ ಸರ್ಕಾರ ಕೂಡ ಆದೇಶ ಮಾಡಲು ಮನಸ್ಸು ಮಾಡಿದೆ ಎನ್ನಲಾಗಿದ್ದು, ಶೀಘ್ರದಲ್ಲೇ ಪೆಟ್ರೋಲಿಯಂ ಉತ್ಪನಗಳ ಮೇಲಿನ ಸೆಸ್ ಅನ್ನು ಕಡಿತಗೊಳಿಸುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ನವದೆಹಲಿಯಲ್ಲಿ ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಸೆಸ್ ಕಡಿಮೆ ಮಾಡುವ ಚಿಂತನೆ ಇದೆ. ನಮ್ಮ ಆರ್ಥಿಕ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಅವರು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡರೆ ನಮ್ಮಲ್ಲಿ ದರ ಕಡಿಮೆ ಇದೆ. ಕೇಂದ್ರ ಸರ್ಕಾರದ ತೈಲ ನೀತಿಗಳ ಬದಲಾವಣೆಯಿಂದಾಗಿ ಹೆಚ್ಚು ಬೆಲೆ ಏರಿಕೆಯಾಗುತ್ತಿದೆ ಎಂದು ಆರೋಪಿಸಿದರು. (ಎನ್.ಬಿ)

Leave a Reply

comments

Related Articles

error: