ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ವೇತನ : ವಿಕಲಚೇತನರಿಂದ ಅರ್ಜಿ ಆಹ್ವಾನ

ಮೈಸೂರು,ಸೆ.10-2018ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗಳಿಗಾಗಿ www.disabilityaffairs.gov.in ವೆಬ್‍ಸೈಟ್‍ ಭೇಟಿ ನೀಡಬಹುದು. ಪ್ರೀ-ಮೆಟ್ರಿಕ್ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಸೆ.30 ಕೊನೆಯ ದಿನ.

ಪೋಸ್ಟ್–ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಜಿಲ್ಲಾ ಕಚೇರಿ ಪುಲಿಕೇಶಿ ರಸ್ತೆ, ತಿಲಕ್‍ನಗರ ಮೈಸೂರು-570001 ದೂ.ಸಂ.0821-2490111ಅನ್ನು ಸಂಪರ್ಕಿಸಬಹುದಾಗಿದೆ. (ಎಂ.ಎನ್)

Leave a Reply

comments

Related Articles

error: