ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ವಿಧಾನಪರಿಷತ್‍ನ 3 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು (ಸೆ.11): ಸ್ಥಳೀಯ ಚುನಾವಣೆ ಮುಗೀತು. ಅದರ ಬೆನ್ನಲ್ಲೇ ರಾಜ್ಯ ವಿಧಾನ ಪರಿಷತ್‍ನ ಮೂರು ಸ್ಥಾನಗಳಿಗೆ ಚುನಾವಣೆ ದಿನಾಂಕವನ್ನು ನಿಗದಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ವೇಳಾಪಟ್ಟಿಯ ಪ್ರಕಾರ ಸೆ.14 ರಂದು ನಾಮಪತ್ರ ಸಲ್ಲಿಸಬಹುದು. ಸೆ. 22 ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಸೆ. 26 ಕೊನೆಯ ದಿನವಾಗಿದ್ದು, ಅ. 3 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ರ ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜಿ.ಪರಮೇಶ್ವರ್, ಕೆ.ಎಸ್. ಈಶ್ವರಪ್ಪ ಮತ್ತು ವಿ.ಸೋಮಣ್ಣ ಇತ್ತೀಚೆಗೆ ವಿಧಾನಸಭೆಗೆ ಆಯ್ಕೆಯಾಗಿದ್ದರಿಂದ ವಿಧಾನ ಪರಿಷತ್‍ನ ಮೂರು ಸ್ಥಾನಗಳು ತೆರವಾಗಿದ್ದವು. (ಎನ್.ಬಿ)

Leave a Reply

comments

Related Articles

error: