ಪ್ರಮುಖ ಸುದ್ದಿ

ಕಾರ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ‌ ಮಹಿಳೆಯರ ಸುಲಿಗೆ : ಖತರ್ನಾಕ್ ವಂಚಕನ ಬಂಧನ

ರಾಜ್ಯ(ಮಂಡ್ಯ)ಸೆ.11:-  ಮಂಡ್ಯದ ನಾಗಮಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಾರ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ‌ ಮಹಿಳೆಯರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್ ವಂಚಕನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಬೆಂಗಳೂರಿನ ಗುಡ್ಡದಹಳ್ಳ ಮೂಲದ ಬಿ.ಸೋಮಶೇಖರ್  ಎಂದು ಗುರುತಿಸಲಾಗಿದ್ದು, ಈತನಿಂದ 50 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು, ಕೃತ್ಯಕ್ಕೆ ಬಳಸುತ್ತಿದ್ದ ಎರಡು ಕಾರನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯರಿಗೆ ಕಾರ್ ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ದರೋಡೆ ನಡೆಸುತ್ತಿದ್ದ. ಕಾರ್ ಗೆ ಹತ್ತಿಸಿಕೊಂಡ ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡುತ್ತಿದ್ದ. ಇತ್ತೀಚೆಗೆ ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರೊಬ್ಬರನ್ನು ದರೋಡೆ ಮಾಡಿದ್ದ. ಆ ಮಹಿಳೆ ನೀಡಿದ ದೂರು ಆಧಾರದ ಮೇಲೆ ಆರೋಪಿಯನ್ನು ನಾಗಮಂಗಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಳ್ಳನಿಂದ 1.626 ಗ್ರಾಂ. ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಈತ ಸುಮಾರು 45ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬಂಧಿತನನ್ನು ನ್ಯಾಯಾಂಗ ಬಂಧನದ ವಶಕ್ಕೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: