
ಮೈಸೂರು
ಜ.1 : ಭಕ್ತಾದಿಗಳಿಗೆ ಲಡ್ಡು ವಿತರಣೆ
ಮೈಸೂರಿನ ವಿಜಯ ನಗರ ಒಂದನೇ ಹಂತದಲ್ಲಿರುವ ಶ್ರೀಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಜನವರಿ 1ರಂದು ಬೆಳಿಗ್ಗೆ 4ಗಂಟೆಯಿಂದ 12ರವರೆಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡುಗಳನ್ನು ಭಕ್ತಾದಿಗಳಿಗೆ ಪ್ರೊ.ಭಾಷ್ಯಂ ಸ್ವಾಮೀಜಿ ವಿತರಿಸಲಿದ್ದಾರೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ತಿಳಿಸಿದರು.
ದೇವಸ್ಥಾನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಶ್ರೀನಿವಾಸನ್ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಧಾರ್ಮಿಕ ಕಾರ್ಯಕ್ರಮಗಳು ಜ.1ರಂದು ಬೆಳಿಗ್ಗೆ 4ಗಂಟೆಯಿಂದಲೇ ನಡೆಯಲಿದ್ದು, ದೇವರಿಗೆ ಹತ್ತು ಕ್ವಿಂಟಾಲ್ ಪುಳಿಯೋಗರೆ ನೈವೇದ್ಯ ಮಾಡಲಾಗುವುದು ಎಂದರು.
ಭಕ್ತಾದಿಗಳಿಗಾಗಿ ಎರಡು ಲಕ್ಷ ಲಡ್ಡು ತಯಾರಿಸಲಾಗಿದ್ದು, ಲಡ್ಡು ತಯಾರಿಕೆಗೆ 50ಕ್ವಿಂಟಾಲ್ ಕಡಲೆಹಿಟ್ಟು, 100ಕ್ವಿಂಟಾಲ್ ಸಕ್ಕರೆ, 4000ಲೀಟರ್ ಖಾದ್ಯ ತೈಲ, 100ಕೆ.ಜಿ.ಗೋಡಂಬಿ, 100ಕೆ.ಜಿ.ಒಣದ್ರಾಕ್ಷಿ, 50ಕೆ.ಜಿ.ಬಾದಾಮಿ, 50ಕೆ.ಜಿ.ಡೈಮಂಡ್ ಸಕ್ಕರೆ, 500ಕೆ.ಜಿ.ಬೂರಾ ಸಕ್ಕರೆ, 10ಕೆ.ಜಿ.ಪೆಸ್ತಾ, 20ಕೆ.ಜಿ.ಏಲಕ್ಕಿ, 20ಕೆ.ಜಿ. ಜಾಕಾಯಿ ಮತ್ತು ಜಾಪತ್ರೆ, 5ಕೆ.ಜಿ. ಪಚ್ಚೆ ಕರ್ಪೂರ, 50ಕೆ.ಜಿ.ಲವಂಗಗಳನ್ನು ಬಳಸಲಾಗಿದೆ ಎಂದು ತಿಳಿಸಿದರು.