ಪ್ರಮುಖ ಸುದ್ದಿ

ಎಗ್ಗಿಲ್ಲದೇ ಅಕ್ರಮ ಮದ್ಯ ಮಾರಾಟ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ

ರಾಜ್ಯ(ಕಲಬುರಗಿ)ಸೆ.12:- ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮದ್ಯದಂಗಡಿಗಳು ತಲೆಎತ್ತುತ್ತಿದ್ದು, ಎಗ್ಗಿಲ್ಲದೇ ಅಕ್ರಮ ಮದ್ಯ ಮಾರಾಟ ನಡೆದರೂ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಮಗೇನಾದರೂ ಅಬಕಾರಿ ಇಲಾಖೆ ಟಾರ್ಗೆಟ್ ನೀಡಿದೆಯೋ ಹೇಗೇ? ಜಿಲ್ಲಾಧಿಕಾರಿಗಳ ಗಮನಕ್ಕೆ ತರದೆ ಅನಧಿಕೃತವಾಗಿ ಮದ್ಯದ ಅಂಗಡಿಗಳನ್ನು ಸ್ಥಳಾಂತರಗೊಳಿಸಿರುವುದು ಗಮನಕ್ಕೆ ಬಂದಲ್ಲಿ ಅಬಕಾರಿ ಇಲಾಖೆಯನ್ನೇ ಮುಚ್ಚಿಸಿಬಿಡುತ್ತೇನೆ  ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ದುಡ್ಡುಕೊಡದಿದ್ದರೆ ಯಾವುದೇ ಕೆಲಸವಾಗಲ್ಲ. ಭ್ರಷ್ಟಾಚಾರ ಮಿತಿ ಮೀರಿದೆ. ಜಿಲ್ಲಾಮಟ್ಟದಲ್ಲಿ ಆಡಳಿತ ನೆಟ್ಟಗಿರುವಂತೆ ನೋಡಿಕೊಳ್ಳಿ ಇಲ್ಲದಿದ್ದಲ್ಲಿ ನಿಮಗೆ ಉಳಿಗಾಲವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: