ಸುದ್ದಿ ಸಂಕ್ಷಿಪ್ತ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಚಟುವಟಿಕೆಗಳ ಉದ್ಘಾಟನೆ.14.

ಮೈಸೂರು,ಸೆ.12 : ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2018-19ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೆಡ್ ಕ್ರಾಸ್, ಉದ್ಯೋಗ ಮಾಹಿತಿ ಕೋಶ, ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸೆ.14ರ ಬೆಳಗ್ಗೆ 11.30ಕ್ಕೆ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ. ರಂಗಾಯಣ ನಿರ್ದೇಶಕಿ ಭಾಗೀರಥಿಬಾಯಿ ಕದಂ ಮುಖ್ಯ ಭಾಷಣ ಮಾಡುವರು. ಮಹಾನಗರ ಪಾಲಿಕೆ ಸದಸ್ಯೆ ಸುನಮದ ಪಾಲನೇತ್ರ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಹೆಚ್.ವೈ. ಶ್ರೀಷಕುಮಾರ್, ಹುಡಾ ಆಯುಕ್ತ ಪಿ.ಎಸ್.ಶಾಂತರಾಜು ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: