ಸುದ್ದಿ ಸಂಕ್ಷಿಪ್ತ

ಸೆ.15 ರಂದು ಮಂಡ್ಯ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಮಂಡ್ಯ (ಸೆ.11): ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ಸೆ.15 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಂದು ಸಂಜೆ 6 ಗಂಟೆಗೆ ಮಂಡ್ಯ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಜಿಸಲಾಗಿರುವ ಗಣಪತಿ ಪೂಜಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಸಂಜೆ 7.30 ಗಂಟೆಗೆ ಪಾಂಡವಪುರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು ಹಾಗೂ ಪಾಂಡವಪುರದಲ್ಲಿ ವಾಸ್ತವ್ಯ ಹೂಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: