ಕರ್ನಾಟಕ

ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ (ಸೆ.12): ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿರುವುದಕ್ಕಾಗಿ ರಾಜ್ಯದ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟೀಯ ಪ್ರಶಸ್ತಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಅವರಿಂದ ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯತ್‍ನ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು ಹಾಗೂ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಶಾಂತ.ಎಂ ಅವರು ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲೂ ಭಾಗವಹಿಸಿದರು. (ಎನ್.ಬಿ)

Leave a Reply

comments

Related Articles

error: