ಕರ್ನಾಟಕ

ನೇಣಿಗೆ ಶರಣಾದ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ

ಮೂಡುಬಿದಿರೆ,ಸೆ.12-ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಬೆಂಗಳೂರು ಮೂಲದ ವಿನೂತ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿನೂತ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿನೂತ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪ್ರಥಮ ಪಿಯುಸಿಯಲ್ಲಿ ಶೇ.98 ಅಂಕ ಪಡೆದಿದ್ದಳು. ಸಾವಿಗೆ ಕಾರಣವೆನೆಂದು ಇನ್ನು ತಿಳಿದುಬಂದಿಲ್ಲ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2018ರ ಜ.7 ರಂದು ಇದೇ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಬೆಂಗಳೂರು ಮೂಲದ ತೇಜಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

2017ರ ಜು.27 ರಂದು ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್ಎಸ್ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಕಾವ್ಯ (15) ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಾವ್ಯಳ ಪೋಷಕರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. (ಎಂ.ಎನ್)

Leave a Reply

comments

Related Articles

error: