ಕರ್ನಾಟಕಪ್ರಮುಖ ಸುದ್ದಿ

ಬೆಳಗಾವಿ 3 ಜಿಲ್ಲೆಯಾಗಿ ವಿಭಜನೆ, ಮಹದಾಯಿ ವಿವಾದದ ಬಗ್ಗೆ ಸಿಎಂ ಮಹತ್ವದ ಚರ್ಚೆ

ಬೆಂಗಳೂರು (ಸೆ.14): ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸೆ.15ರಂದು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಬಗ್ಗೆ ಇಂದು (ಸೆ.14) ಮಧ್ಯಾಹ್ನ ಮಹದಾಯಿ ನದಿ ನೀರಿನ ವಿವಾದ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹಿರಿಯ ಅಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಬೆಳಗಾವಿ ಜಿಲ್ಲೆಯ ಜಾರಕಿಹೊಳಿ ಸಹೋದರರ ಭಿನ್ನಮತದ ಹಿನ್ನೆಲೆಯಲ್ಲೂ ಸಿ.ಎಂ ಬೆಳಗಾವಿ ಭೇಟಿ ಪ್ರಾಮುಖ್ಯತೆ ಪಡೆದಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯನ್ನು ಮೂರು ಭಾಗಗಳಾಗಿ ವಿಂಗಡಿಸಿ ಬೆಳಗಾವಿ, ಚಿಕ್ಕೋಡಿ ಹಾಗೂ ಗೋಕಾಕ್ ಜಿಲ್ಲೆಗಳನ್ನಾಗಿ ವಿಂಗಡಿಸುವ ಕುರಿತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಲ್ಲೆಯನ್ನು ವಿಭಜಿಸಿದರೆ ಉಂಟಾಗಬಹುದಾದ ಆರ್ಥಿಕ ಹೊರೆ, ರಾಜಕೀಯ ಪರಿಣಾಮಗಳ ಕುರಿತು ಸಿಎಂ ಕುಮಾರಸ್ವಾಮಿ ಅವರು ಸಚಿವ ಸಂಪುಟದ ಹಿರಿಯ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇಷ್ಟೇ ಅಲ್ಲದೆ ಮಹಾದಾಯಿ ನ್ಯಾಯಾಧಿಕರಣದ ಇತ್ತೀಚಿನ ಬೆಳವಣಿಗೆ, ಕಾವೇರಿ ನೀರಾವರಿ ನಿಗಮ ಬೋರ್ಡ್ ಮೀಟಿಂಗ್, ರಾಜೀವ್ ಗಾಂಧಿ ಆರೋಗ್ಯ ವಿವಿ ಸಂಬಂಧ ಸಭೆ, ವಾಣಿಜ್ಯ ತೆರಿಗೆ, ಅಬಕಾರಿ ಇಲಾಖೆ, ನೊಂದಣಿ ಮತ್ತು ಮುದ್ರಾಂಕ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆಯೂ ಸಹ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: