ಮೈಸೂರು

ಸೆ.19,20ರಂದು ಪಿಯು ವಿದ್ಯಾರ್ಥಿಗಳಿಗಾಗಿ ಬೋಳೆಶಂಕರ-ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನ

ಮೈಸೂರು,ಸೆ.14 : ಅನ್ವೇಷಕರು ಆರ್ಟ್ ಫೌಂಡೇಷನ್, ಅಧಮ್ಯ ರಂಗಶಾಲೆ ಸಹಯೋಗದೊಂದಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸೆ.19,20ರಂದು ನಗರದ ಕಲಾಮಂದಿರದಲ್ಲಿ ಬೋಳೆಶಂಕರ ಹಾಗೂ ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಫೌಂಡೇಷನ್ ನ ವ್ಯವಸ್ಥಾಪಕ ಟ್ರಸ್ಟಿ ಎಸ್.ಎಸ್.ಸಿದ್ದರಾಜು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ದಯಾನಂದ ನಾಟಕೋತ್ಸವಕ್ಕೆ ಚಾಲನೆ ನೀಡಲಿದ್ದು, ಆಡಳಿತ ತರಬೇತಿ ಸಂಸ್ಥೆ ಜಂಟಿ ನಿರ್ದೇಶಕರಾದ ಭಾಗ್ಯಲಕ್ಷ್ಮಿ ಅತಿಥಿಯಾಗಿ ಭಾಗವಹಿಸಲಿದ್ದು, ರಂಗಾಯಣದ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೆ.19ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ರಚನೆಯ ‘ಬೋಳೆಶಂಕರ’ ಸೆ.20ರಂದು ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಪೂರ್ಣಚಂದ್ರ ತೇಜಸ್ವಿಯವರ ‘ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನಗೊಳ್ಳಲಿದೆ. ಈ ಎರಡು ನಾಟಕಗಳು ಪದವಿಪೂರ್ವ ಶಿಕ್ಷಣದಲ್ಲಿ ಪಠ್ಯದಲ್ಲಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ  ಬೆಳಗ್ಗೆ 10, ಮಧ್ಯಾಹ್ನ 12, 2 ಹಾಗೂ ಸಂಜೆ 4 ಗಂಟೆಗೆ ಎರಡು ದಿನಗಳು ದಿನಂಪ್ರತಿ ನಾಲ್ಕು ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ರಾಜ್ಯದ ವಿವಿಧೆಡೆ ಪ್ರದರ್ಶನಗೊಂಡಿದ್ದು, ಈ ನಿಟ್ಟಿನಲ್ಲಿ ಮೈಸೂರಿನಲ್ಲಿಯೂ ಈ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಅಧಮ್ಯ ರಂಗಶಾಲೆಯ ಚಂದ್ರು ಮಂಡ್ಯ ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: