ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿಯ ಆಪರೇಷನ್ ರಾಜಕೀಯ? ಎಸಿಬಿ, ಐಟಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು (ಸೆ.14): ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಹಿನ್ನಲೆಯಲ್ಲಿ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ-ಎಸಿಬಿ ಹಾಗೂ ಕೇಂದ್ರ ಆದಾಯ ತೆರಿಗೆ ಇಲಾಖೆ -ಐಟಿಗೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್‍ನಲ್ಲಿ ಸದ್ಯಕ್ಕೆ ನಡೆಯುತ್ತಿರುವ ಎಲ್ಲಾ ಬೆಳವಣಿಗಳ ಬಗ್ಗೆ ಡಿ.ಕೆ..ಶಿವಕುಮಾರ್ ಅವರ ಮನೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಪರಮೇಶ್ವರ್ ಅವರ ಜೊತೆ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, “ಅಪರೇಷನ್ ಕಮಲದ ಬಗ್ಗೆ ಮಾಧ್ಯಮಗಳಲ್ಲಿ ಬರುವ ಸುದ್ದಿಗಳನ್ನು ಆಧರಿಸಿ ಬಿಜೆಪಿ ವಿರುದ್ಧ ದೂರು ನೀಡಲು ನಿರ್ಧರಿಸಲಾಗಿದೆ. ಕಾಂಗ್ರೆಸ್‍ನ ಸದ್ಯದ ಪರಿಸ್ಥಿತಿಯನ್ನು ಬಿಜೆಪಿ ಸದುಪಯೋಗಪಡಿಸಿಕೊಳ್ಳಲು ಅವಕಾಶ ಕೊಡದಿರಲು ಕಾಂಗ್ರೆಸ್ ಪಕ್ಷವೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: