ಸುದ್ದಿ ಸಂಕ್ಷಿಪ್ತ

ವಿದ್ಯಾವರ್ಧಕ : ನೇಚರ್ ಕ್ಲಬ್ ಚಟುವಟಿಕೆಗೆ ನಾಳೆ ಚಾಲನೆ

ಮೈಸೂರು,ಸೆ.14 : ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ನೇಚರ್ ಕ್ಲಬ್ ಚಟುವಟಿಕೆಯ ಉದ್ಘಾಟನಾ ಸಮಾರಂಭವನ್ನು ನಾಳೆ (15)ರ ಬೆಳಗ್ಗೆ 10.30ಕ್ಕೆ ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿ ಏರ್ಪಡಿಸಲಾಗಿದೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ದರಾಮಪ್ಪ ಚಳಕಾಪುರೆ ಉದ್ಘಾಟಿಸಲಿದ್ದಾರೆ. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್ ಅಧ್ಯಕ್ಷತೆ. ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಅನನ್ಯ ಕುಮಾರ್, ರಂಗನತಿಟ್ಟು ಪಕ್ಷಧಾಮ ಶಾಖೆ ಉಪವಲಯ ಅರಣ್ಯಾಧಿಕಾರಿ ಎಂ.ಪುಟ್ಟಮಾದೇಗೌಡ, ಸಂಘೆದ ಕೋಶಾಧ್ಯಕ್ಷ ಎಸ್.ಎನ್.ಲಕ್ಷ್ಮೀನಾರಾಯಣ, ಕಾಲೇಜು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ನಾಗರಾಜು, ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಮರೀಗೌಡ ಹಾಜರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: