
ಕರ್ನಾಟಕ
ಹೊರರಾಜ್ಯ ಕನ್ನಡಗರಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರವೇಶಾವಕಾಶ
ಮಂಡ್ಯ (ಸೆ.15): ಭಾರತ ದೇಶದ ಯಾವುದೇ ಭಾಗದಲ್ಲಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ, ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ, ಡಿಪ್ಲೋಮಾ ಕೋರ್ಸ್ಗಳ ಕಾಲೇಜುಗಳಲ್ಲಿ, ತಾಂತ್ರಿಕ ಸಂಸ್ಥೆಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್ಗಳಿಗೆ ಗಡಿನಾಡು/ಹೊರನಾಡು ಕನ್ನಡಿಗರ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿ ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಗೀತಾ ಕುಮಾರಿ ಅವರು ಆದೇಶಿಸಿದ್ದಾರೆ. (ಎನ್.ಬಿ)