ಕರ್ನಾಟಕ

ಸೆ.17 ರಂದು ವಿಶ್ವಕರ್ಮ ದಿನಾಚರಣೆ

ಹಾಸನ (ಸೆ.14): ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಸೆ.17 ರಂದು ಬೆಳಗ್ಗೆ 11 ಗಂಟೆಗೆ ಹಾಸನಾಂಬ ಕಲಾ ಕ್ಷೇತ್ರದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮಾಜಿ ಪ್ರಧಾನ ಮಂತ್ರಿಯವರು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತರಿರುವರು. ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ.ರೇವಣ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಪ್ರೀತಂ ಜೆ.ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ಶಾಸಕರುಗಳಾದ ಎ.ಟಿ.ರಾಮಸ್ವಾಮಿ ಹೆಚ್.ಕೆ.ಕುಮಾರ ಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಕೆ.ಎಸ್.ಲಿಂಗೇಶ್, ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಂ.ಎ.ಗೋಪಾಲಸ್ವಾಮಿ, ಕೆ.ಟಿ ಶ್ರೀಕಂಠೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಬಿ.ಟಿ.ಸತೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಮಂಟೇಲಿಂಗಾಚಾರ್ ಕಾರ್ಯಕ್ರಮ ಕುರಿತು ಉಪನ್ಯಾಸ ನೀಡಲಿರುವರು. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಆವರಣದಿಂದ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಹಾಸನಾಂಬ ಕಲಾಕ್ಷೇತ್ರಕ್ಕೆ ಸಾಗಲಿದೆ.(ಎನ್.ಬಿ)

Leave a Reply

comments

Related Articles

error: