ಕರ್ನಾಟಕ

ಜಾರಕಿಹೊಳಿ ಬಿಟ್ಟು ಬೇರೆ ವಿಷಯ ಇಲ್ಲವೇ? ಮಾಧ್ಯಮಗಳ ವಿರುದ್ಧ ಗೌಡರು ಗರಂ!

ಬೆಂಗಳೂರು (ಸೆ.15): ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಬಂದೊದಗಿರುವ ಕಂಟದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು, ಬೆಳಗ್ಗೆಯಿಂದ ಸಂಜೆಯವರೆಗೂ ಜಾರಕಿಹೊಳಿ ಸಹೋದರರ ಕುರಿತು ಮಾತನಾಡದೆ ಕರ್ನಾಟಕದ ಅಭಿವೃದ್ಧಿ ಕುರಿತು ಮಾತನಾಡಿ ಎಂದು ತಾಕೀತು ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ ಅವರು, ಜಾರಕಿಹೊಳಿ ಸಹೋದರರ ಬಗ್ಗೆ ಪ್ರಶ್ನೆಗಳಿದ್ದರೆ ಅವರನ್ನೇ ಹೋಗಿ ಕೇಳಿ, ನನ್ನನ್ನು ಆ ಬಗ್ಗೆ ಪ್ರಶ್ನಿಸಬೇಡಿ ಎಂದರು. ಅಷ್ಟೇ ಅಲ್ಲ ಕರ್ನಾಟಕದಲ್ಲಿ ಹಾಗೂ ದೇಶದಲ್ಲಿ ಜಾರಕಿಹೊಳಿ ಸಹೋರರನ್ನು ಬಿಟ್ಟು ಬೇರೇನೂ ಕಾಣುತ್ತಿಲ್ಲವೆ ಎಂದು ಕೋಪದಿಂದ ನುಡಿದರು.

ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಬಡವರ ಮೇಲೆ ಒತ್ತಡ ಹೇರಿ ಸಾಲ ವಸೂಲಿ ಮಾಡುತ್ತಿದ್ದ ದಂಧೆ ನಿಲ್ಲಿಸಿದ್ದೇವೆ. ಕರ್ನಾಟಕದ ರೈತರ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಮ್ಮಿಶ್ರ ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ಎಲ್ಲ ವಿಚಾರಗಳೂ ಮಾಧ್ಯಮದವರ ಕಣ್ಣಿಗೆ ಕಾಣುತ್ತಿಲ್ಲ, ಕೇವಲ ಬೆಳಗ್ಗೆಯಿಂದ ಸಂಜೆಯವರೆಗೂ ಜಾರಕಿಹೊಳಿ ಸಹೋದರರ ಬಗ್ಗೆ ಮಾತನಾಡುತ್ತಿದ್ದರೆ ಇದರಿಂದ ರಾಜ್ಯದ ಜನರಿಗೆ ಏನು ಅನುಕೂಲವಾಗುತ್ತದೆ ಎಂದು ಖಾರವಾಗಿ ನುಡಿದರು.

ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಜನರಿಗೆ ಏನೇನು ಅನುಕೂಲವಾಗುತ್ತಿದೆ ಎನ್ನುವುದನ್ನು ಮೊದಲು ನೋಡಿ, ಜಾರಕಿಹೊಳಿ ಸಹೋದರರ ಬಗ್ಗೆ ಏನೇ ಪ್ರಶ್ನೆಗಳಿದ್ದರೂ ಅವರನ್ನೇ ಹೋಗಿ ಕೇಳಿ ಎಂದು ತಾಕೀತು ಮಾಡಿದರು. (ಎನ್.ಬಿ)

Leave a Reply

comments

Related Articles

error: