ಮೈಸೂರು

ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಏಕಾಂಗಿ ಪ್ರತಿಭಟನೆ

ಮೈಸೂರು,ಸೆ.15:- ಜಂತರ್ ಮಂತರ್ ನಲ್ಲಿ ಸಂವಿಧಾನದ ಪ್ರತಿಯನ್ನು ಸುಟ್ಟು ಹಾಕಿ,ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿ ಭಾರತಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಎಲೆಕ್ಟ್ರಿಕಲ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಸಂವಿಧಾನದ ಪ್ರತಿಯನ್ನು ಸುಟ್ಟು ಭಾರತಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಅವರಿಗೆ ಸಿಕ್ಷೆ ವಿಧಿಸುವ ಮೂಲಕ ಮತ್ತೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು. ಇಂತಹ ದೇಶದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹಂದನಹಳ್ಳಿಯಲ್ಲಿ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಲಾಗಿದೆ. ಇಂತಹ ಬಹಿಷ್ಕಾರ ಪದ್ಧತಿಯನ್ನು ತೊಲಗಿಸಬೇಕು. ಬಹಿಷ್ಕಾರ ಹಾಕುವವರಿಗೆ ಶಿಕ್ಷೆ ಮತ್ತು ದಂಡ ವಿಧಿಸಬೇಕು ಎಂದು ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: