ಸುದ್ದಿ ಸಂಕ್ಷಿಪ್ತ

ಸೆ.18 ರಂದು ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಮೈಸೂರು,ಸೆ.15-ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ -2018  ಉದ್ಘಾಟನಾ ಸಮಾರಂಭವನ್ನು ಸೆ.18 ರಂದು ಬೆಳಿಗ್ಗೆ 10.30ಕ್ಕೆ ನಜರ್ಬಾದ್ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ಧ್ವಜಾರೋಹಣ ನೆರವೇರಿಸುವರು. ಶಾಸಕ ತನ್ವೀರ್ ಸೇಠ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ್, ಶಾಸಕರಾದ ಅಡಗೂರು ಹೆಚ್.ವಿಶ್ವನಾಥ್, ಎಸ್.. ರಾಮದಾಸ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: