ಕರ್ನಾಟಕಪ್ರಮುಖ ಸುದ್ದಿ

ಆಪರೇಷನ್ ಕಮಲದ ಬಗ್ಗೆ ನನಗೆ ಮಾಹಿತಿ ಇಲ್ಲ: ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ (ಸೆ.15): “ನಾನು ಮೊದಲಿನಿಂದಲೂ ಕಾಂಗ್ರೆಸ್ ಪರ ಇದ್ದೇನೆ. ಆದರೆ ಆಪರೇಷನ್ ಕಮಲದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ” ಎಂದು ಶಾಸಕ ಸತೀಶ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 5 ವರ್ಷ ಪೂರ್ಣಗೊಳಿಸಲಿದೆ. ಸಿದ್ದರಾಮಯ್ಯ ಹಾಗೂ ಈ ಸಮಸ್ಯೆಗೆ ಯಾವುದೇ ಸಂಬಂಧವಿಲ್ಲ. ಹಾಗಾಗಿ ಸಿದ್ದರಾಮಯ್ಯ ಜೊತೆಗೆ ನಾನು ಮಾತುಕತೆ ನಡೆಸಲ್ಲ ಎಂದು ಹೇಳಿದರು.

ಈಗಾಗಲೇ ಡಿ.ಕೆ. ಶಿವಕುಮಾರ್ ಬೆಳಗಾವಿ ಜಿಲ್ಲೆಯಲ್ಲಿ ಹಸ್ತಕ್ಷೇಪ ಮಾಡಲ್ಲ ಎಂದಿದ್ದಾರೆ. ಶಿವಕುಮಾರ್ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದರು. (ಎನ್.ಬಿ)

Leave a Reply

comments

Related Articles

error: