ಪ್ರಮುಖ ಸುದ್ದಿ

ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ ಹಿರಿಯ ನಾಗರೀಕರು

ರಾಜ್ಯ(ಮಡಿಕೇರಿ) ಸೆ.15 :- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿಹಿರಿಯ ನಾಗರಿಕರ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯ ನಾಗರೀಕರ ವೇದಿಕೆಯ ಪ್ರಮುಖ ಜಿ.ಟಿ.ರಾಘವೇಂದ್ರ ಹಿರಿಯರು ಅತಿ ಉತ್ಸಾಹದಿಂದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಹೆಮ್ಮೆಯ ವಿಚಾರವೆಂದರು.

ಹಿರಿಯ ನಾಗರೀಕರು ಸದಾ ಕ್ರಿಯಾಶೀಲತೆಯಿಂದ ಇರುವಂತಾಗಲು ಈ ರೀತಿಯ ಚಟುವಟಿಕೆಗಳು ಹೆಚ್ಚು ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ, ಹಿರಿಯ ನಾಗರಿಕ ಸೇವಾ ಟ್ರಸ್ಟ್‍ನ ಉಪಾಧ್ಯಕ್ಷರಾದ ಪ್ರಸನ್ನ, ಕಮಲಾಕ್ಷಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ದೇವರಾಜು, ಮಹಾಲಿಂಗೇಶ್ವರ ವಿದ್ಯಾಸಂಸ್ಥೆ, ಸ್ತ್ರೀಶಕ್ತಿ ವೃದ್ಧಾಶ್ರಮ, ಹಿರಿಯ ನಾಗರಿಕರ ಸಹಾಯವಾಣಿ, ಹಿರಿಯ ನಾಗರಿಕ ಹಗಲು ಯೋಗಕ್ಷೇಮ, ವಿಕಾಸ್ ಜನಸೇವಾ ಟ್ರಸ್ಟ್ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.

ಓಟ, ಕ್ರೀಡಾಕೂಟ ಸೇರಿದಂತೆ ಏಕ ಪಾತ್ರಾಭಿನಯ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಿರಿಯ ನಾಗರೀಕರು ಗಮನ ಸೆಳೆದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: