ಪ್ರಮುಖ ಸುದ್ದಿ

ಚಿನ್ನಾಭರಣ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ರಾಜ್ಯ(ಬೆಂಗಳೂರು)ಸೆ.17:- ಬೆಂಗಳೂರಿನಲ್ಲಿ ನಿನ್ನೆ ಬೆಳ್ಳಂಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ.

ನಗರದ ನಗರ್ತ ಪೇಟೆಯಲ್ಲಿರುವ ಚಿನ್ನಾಭರಣಗಳ ಅಂಗಡಿಗಳ ಮೇಲೆ ಹಠಾತ್ ದಾಳಿ ನಡೆಸಿ ತಪಾಸಣೆ ಕೈಗೊಂಡಿದ್ದಾರೆ. ಯಾವುದೇ ರಸೀದಿ ಇಲ್ಲದೆ ವಹಿವಾಟು ನಡೆಸಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಸೀದಿ ಇಲ್ಲದೆ ವಹಿವಾಟು ನಡೆಸಿದ ಬಗ್ಗೆ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಪರಿಶೀಲನಾ ಕಾರ್ಯ ನಡೆಸಲಾಗಿದೆ ಎಂದು ಹೇಳಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: