ಮೈಸೂರು

ಭವ್ಯ ಮೆರವಣಿಗೆಯಲ್ಲಿ ಕೊಂಡೊಯ್ದು ಸಾಮೂಹಿಕ ಗಣೇಶ ವಿಗ್ರಹಗಳ ವಿಸರ್ಜನೆ

ಮೈಸೂರು,ಸೆ.17:- ವೀರನಗೆರೆ, ಕೆಸರೆ, ಕ್ಯಾತಮಾರನಹಳ್ಳಿ, ಉದಯಗಿರಿ,ಲಷ್ಕರ್ ಮೊಹಲ್ಲಾ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪೂಜಿಸಲ್ಪಟ್ಟ ಗಣೇಶನ ವಿಗ್ರಹವನ್ನು ಏಕಕಾಲದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಯಿತು.

ನಿನ್ನೆ ನಗರದಲ್ಲಿ ಸಾಮೂಹಿಕ ಗಣೇಶ ವಿಗ್ರಹ ವಿಸರ್ಜನಾ ಕಾರ್ಯಕ್ರಮ ನಡೆದಿದ್ದು, ನಗರದಲ್ಲಿ ಕೇಸರಿ ಬಾವುಟಗಳು ರಾರಾಜಿಸಿದವು. ಪೇಟ ಧರಿಸಿದ ಯುವಕರು, ಕೈಗೆ ಕೇಸರಿ ಪಟ್ಟಿಕಟ್ಟಿಕೊಂಡ ಚಿಣ್ಣರು ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಮೆರವಣಿಗೆಯುದ್ದಕ್ಕೂ ನೃತ್ಯ ಮಾಡಿಕೊಂಡು ಸಾಗುತ್ತ ಬಣ್ಣದೋಕುಳಿಯಲ್ಲಿ ಮಿಂದೆದ್ದರು. ವಿವಿಧ ಭಕ್ತಿಗೀತೆಗಳ ಗಾನಸುಧೆ, ನಗಾರಿ, ಡೊಳ್ಳು ಬ್ಯಾಮಡ್ ಸೆಟ್ ಸೇರಿದಂತೆ ವಿವಿಧ ಮಂಗಳವಾದ್ಯಗಳು ಮೇಳೈಸಿದ್ದವು. ಸುಮಾರು ಮೂವತ್ತಕ್ಕೂ ಹೆಚ್ಚಿನ ವಿಗ್ರಹಗಳನ್ನು ಕೊಂಡೊಯ್ಯಲಾಗಿತ್ತು. ಭವ್ಯ ಮೆರವಣಿಗೆಯನ್ನು ಕಣ್ತುಂಬಿಸಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರವೇ ನೆರೆದಿತ್ತು. ಗಣೇಶ ಮೂರ್ತಿಯ ಜೊತೆ ಜೊತೆಗೆ ಛತ್ರಪತಿ ಶಿವಾಜಿ, ಸ್ವಾಮಿ ವಿವೇಕಾನಂದ, ಭಗತ್ ಸಿಂಗ್, ರಾಮಕೃಷ್ಣ ಪರಮಹಂಸ ಸೇರಿದಂತೆ ಹಲವು ಮಹನೀಯರ ಭಾವಚಿತ್ರಗಳು ರಾರಾಜಿಸಿದವು. ಅಹಿತಕರ ಘಟನೆ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ

ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: