ಮೈಸೂರು

ಹಿರಿಯರು ಶ್ರಮದಿಂದ ಕಟ್ಟಿದ ಸಂಸ್ಥೆ ಖಾಸಗೀಕರಣಗೊಳಿಸದಿರಿ : ವಾಸು

ಬಿಇಎಂಎಲ್ ಕೈಗಾರಿಕೋದ್ಯಮದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿದ್ದು, ಹಿರಿಯರು ಶ್ರಮದಿಂದ ಕಟ್ಟಿದ ಸಂಸ್ಥೆಯನ್ನು ಖಾಸಗೀಕರಣಗೊಳಿಸದಿರಿ ಎಂದು ಶಾಸಕ ಪಿ.ವಾಸು ತಿಳಿಸಿದರು.

ಮೈಸೂರಿನ ಕಲಾಮಂದಿರದಲ್ಲಿ ಬಿಇಎಂಎಲ್ ಒಕ್ಕಲಿಗರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ 25ನೇ ರಜತ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಸು  ಮಾತನಾಡಿದರು. ಬಿಇಎಂಎಲ್ 53 ವರ್ಷಗಳಿಂದ ಲಾಭ ಪಡೆಯುತ್ತಿರುವ ಏಕೈಕ ಸಂಸ್ಥೆಯಾಗಿದೆ. ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು. ಶಿಕ್ಷಣ ಯಾರಪ್ಪನ ಸ್ವತ್ತಲ್ಲ. ಅದನ್ನು ಕಿತ್ತುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ತಿಳಿಸಿದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಕಾರ್ಮಿಕರ ಮಕ್ಕಳನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದಾಗ ಮಾತ್ರ ಅವರಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಿಇಎಂಎಲ್ ಒಕ್ಕಲಿಗ ನೌಕರರ 100ಕ್ಕೂ ಹೆಚ್ಚು ಮಕ್ಕಳಿಗೆ ಪ್ರಶಸ್ತಿ ಪ್ರದಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಾದ ಚರ್ಮರೋಗ ತಜ್ಞ ಡಾ.ಶಂಕರೇಗೌಡ, ರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ತಂಡದ ನಾಯಕಿ ಹೆಚ್.ಎಂ.ಭಾಂಧವ್ಯ ಮತ್ತು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆಯ ಅಧ್ಯಕ್ಷ ಹೆಚ್.ಎಸ್. ಸುರೇಶ್‍ಬಾಬು ಇವ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮೇಯರ್ ಎಂ.ಜೆ. ರವಿಕುಮಾರ್, ಮಾಜಿ ಶಾಸಕ ಸತ್ಯನಾರಾಯಣ್, ಪಾಲಿಕೆ ಸದಸ್ಯ ಪ್ರಶಾಂತ್‍ಗೌಡ  ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: