ಮೈಸೂರು

ಆಯಾಗಳಿಗೆ ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಸೆ.17:- ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಆಯಾಗಳಿಗೆ  ಕನಿಷ್ಠ ವೇತನ ನಿಗದಿ ಪಡಿಸಿ ಹತ್ತು ವರ್ಷಗಳು ಕಳೆದರೂ ಕನಿಷ್ಠ ವೇತನವನ್ನು ನೀಡದೇ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಮೈಸೂರಿನ ಜಿಲ್ಲಾ ಪಂಚಾಯತ್ ಮುಂಭಾಗ  ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿಂದು ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ  ಸರಕಾರ ಆಯಾಗಳ ಹುದ್ದೆಗಳನ್ನು ಪ್ರತಿ ಬಾರಿ ಬದಲಾವಣೆ ಮಾಡಿ ಆಯಾಗಳಿಗೆ ನೀಡಬೇಕಾದ ಸೌಕರ್ಯಗಳನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಆಯಾಗಳ ವಯಸ್ಸು 60 ದಾಟಿದ್ದು ಅವರಿಗೆ ಪಿಂಚಣಿ ಹಣವನ್ನು ನೀಡಿ ಅವರಿಗೆ ರಕ್ಷಣೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಂ.ಮಹೇಶ್ ಕುಮಾರ್, ಮಾಚಮ್ಮ, ಪದ್ಮಾವತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: