ಕರ್ನಾಟಕಪ್ರಮುಖ ಸುದ್ದಿ

ಮಾಜಿ ಸಿ.ಎಂ ಸಿದ್ದರಾಮಯ್ಯ ಭೇಟಿಗಾಗಿ ಬೆಂಗಳೂರಿಗೆ ಬಂದ ರಮೇಶ್ ಜಾರಕಿಹೊಳಿ

ಬೆಂಗಳೂರು (ಸೆ.17): ಸಚಿವ ರಮೇಶ್ ಜಾರಕಿಹೊಳಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯರನ್ನು ಇಂದು ಭೇಟಿ ಮಾಡಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಆಗಮಿಸಿರವ ಜಾರಕಿಹೊಳಿ ಸಿದ್ದರಾಮಯ್ಯ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.

ಜಾರಕಿಹೊಳಿ ಸಹೋದರರ ಮುನಿಸನ್ನು ಶಮನಗೊಳಿಸುವ ಜವಾಬ್ದಾರಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನಿನ್ನೆ ಮಾಜಿ ಸಿ.ಎಂ ಸಿದ್ದರಾಮಯ್ಯ ಹೆಗೆಲಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಇಲ್ಲವೇ ನಾಳೆ ಸತೀಶ್ ಜಾರಕಿಹೊಳಿ ಅವರನ್ನು ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಕರೆಸಿಕೊಂಡು ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.(ಎನ್.ಬಿ)

Leave a Reply

comments

Related Articles

error: