ಕರ್ನಾಟಕಪ್ರಮುಖ ಸುದ್ದಿ

ಜಾರಕಿಹೊಳಿ ಸಹೋದರರಿಗೆ ತಿರುಗೇಟು ನೀಡಲು ಕಾಂಗ್ರೆಸ್ ತಯಾರಿ?

ಬೆಂಗಳೂರು (ಸೆ.17): ಕಾಂಗ್ರೆಸ್ ಪಕ್ಷದಲ್ಲಿ ಜಾರಕಿಹೊಳಿ ಸಹೋದರನ್ನು ಕಟ್ಟಿಹಾಕಲು ತಂತ್ರ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ನಾನು ಏಲ್ಲಿ ಬೇಕಾದರು ರಾಜಕೀಯ ಮಾಡಬಹುದು ಎಂದು ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರಮೇಶ್ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡುತ್ತಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಳಗಾವಿ ಲೋಕಸಭೆಗೆ ರಮೇಶ್ ಜಾರಕಿಹೊಳಿ ಅವರನ್ನೇ ಕಣಕ್ಕಿಳಿಸಲು ವೇಣುಗೋಪಾಲ್‍ ಅವರಿಗೆ ರಾಹುಲ್ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ರಮೇಶ್ ಬದಲು ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.

ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿ ಲೋಕಸಭೆ ಸ್ಪರ್ಧೆಗೆ ಒಪ್ಪಿಸುವಂತೆ ಸಿದ್ದರಾಮಯ್ಯಗೆ ಕೆ.ಸಿ ವೇಣುಗೋಪಾಲ್ ಹೊಣೆ ನೀಡಿದ್ದು, ಸೋಮವಾರ ರಮೇಶ್ ಜಾರಕಿಹೊಳಿ ಅವರ ಜೊತೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆ ಇದೆ.

ಇದು ಬೆಳಗಾವಿ ಕೈ ಪಾಳೆಯದಲ್ಲಿ ಮತ್ತೆ ಗೊಂದಲಕ್ಕೆ ಕಾರಣವಾಗಿದ್ದು, ಸಚಿವ ಸ್ಥಾನದಿಂದ ಕೆಳಗಿಳಿಸಿದರೆ ರಮೇಶ್ ಜಾರಕಿಹೊಳಿ ಮೈತ್ರಿ ಸರ್ಕಾರವನ್ನು ಉಳಿಸುತ್ತಾರಾ ಎನ್ನುವ ಪ್ರಶ್ನೆಯೂ ಎದ್ದಿದೆ.ಈ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಜೊತೆ ಇರುವ ಶಾಸಕರನ್ನೂ ಹತೋಟಿಗೆ ತೆಗೆದುಕೊಳ್ಳಲು ಸಿದ್ದರಾಮಯ್ಯ ಅವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರ ಪ್ರಯತ್ನಗಳು ಆರಂಭವಾಗಿದ್ದು, ಎಷ್ಟರ ಮಟ್ಟಿಗೆ ಫಲ ನೀಡುವುದು ಎಂಬುದನ್ನು ಕಾದು ನೋಡಬೇಕಿದೆ. (ಎನ್.ಬಿ)

Leave a Reply

comments

Related Articles

error: