ಮೈಸೂರು

ಪ್ರಧಾನಿ ಮೋದಿ ಹುಟ್ಟು ಹಬ್ಬದ ಪ್ರಯುಕ್ತ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಎಸ್.ಎ.ರಾಮದಾಸ್

ಮೈಸೂರು,ಸೆ.17:- ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರಿನ ಕೃಷ್ಣ ರಾಜ ಕ್ಷೇತ್ರದಾದ್ಯಂತ ಇಂದು ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಸಕ ಎಸ್ ಎ ರಾಮಾದಾಸ್  ಶಾರದಾ ದೇವಿ ನಗರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಉದ್ಯಾನವನವೊಂದರಲ್ಲಿ ಗಿಡ ನೆಟ್ಟು ಅದಕ್ಕೆ ನೀರುಣಿಸಿದರು. ಸಂದರ್ಭದಲ್ಲಿ ದಿನನಿತ್ಯ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿರುವ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.

ಮಾಜಿ ನಗರಪಾಲಿಕೆ ಸದಸ್ಯರಾದ ಜಗದೀಶ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ  ಬಿ.ಎಂ.ರಘು,  ಭಾಷ್ಯಂ ಶಿವಣ್ಣ, ರಮೇಶ್,ಮಧು, ಕೆ ಎಂ ರಾಜಣ್ಣ, ರುಕ್ಮಿಣಿ, ರಾಧಾಮಣಿ,ವಿಜಯತ್ ರಾಜಶೇಖರ್, ನವೀನ್, ಹರೀಶ್  ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: