ಕರ್ನಾಟಕ

ಸೇನಾ ನೇಮಕಾತಿ ರ್‍ಯಾಲಿಗಾಗಿ ಉಚಿತ ಪರೀಕ್ಷಾ ಪೂರ್ವ ತರಬೇತಿ

ಮಂಡ್ಯ (ಸೆ.17): ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ:13.10.2018 ರಿಂದ 19.10.2018 ರ ವರೆಗೆ ಸೇನಾ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಲಾಗಿದೆ.

ಈ ರ್ಯಾಲಿಯಲ್ಲಿ ಬಾಗವಹಿಸಲು ಆನ್ ಲೈನ್ ಮೂಲಕ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡಿರುವ ಜಿಲ್ಲೆಯ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ 29 ರ ವರೆಗೆ ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸ್ಟಡಿಸರ್ಕಲ್ ವತಿಯಿಂದ ಉಚಿತ ಪರೀಕ್ಷಾ ಪೂರ್ವತರಬೇತಿಯನ್ನು ಏರ್ಪಡಿಸಿದ್ದು, ತರಬೇತಿಯಲ್ಲಿ ಬಾಗವಹಿಸಿ ಇದರ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08232 220126 ನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: