ಕರ್ನಾಟಕ

ಸೆ.18-19: ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಡ್ಯ (ಸೆ.17): ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಯಡಿ ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ತಾವರದ ಹತ್ತಿರ ಸೆಪ್ಟೆಂಬರ್ 18 ರಂದು ಸೆಸ್ಕ್ ವತಿಯಿಂದ ವಿದ್ಯುತ್ ಲೈನ್ ದುರಸ್ಥಿ ಕಾಮಗಾರಿ ಕೈಗೊಂಡಿದ್ದು, ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ಹಾಗೂ ನಗರದಲ್ಲಿ ನೀರು ಸರಬರಾಜು ಕೊಳವೆ ಮಾರ್ಗಗಳ ದುರಸ್ಥಿ ಕಾಮಗಾರಿ ಕೈಗೊಳ್ಳುವುದರಿಂದ ನೀರನ್ನು ಪಂಪು ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮಂಡ್ಯ ನಗರದ ಸಾರ್ವಜನಿಕರಿಗೆ ಸೆಪ್ಟೆಂಬರ್ 18 ಮತ್ತು 19 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ. (ಎನ್.ಬಿ)

Leave a Reply

comments

Related Articles

error: