ಸುದ್ದಿ ಸಂಕ್ಷಿಪ್ತ

ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ

ಮೈಸೂರು,ಸೆ.18 :  ಕಾರ್ಮಿಕ ವಿರೋಧಿ ನೀತಿ ಹಾಗೂ ಕಾರ್ಪೊರೇಟ್ ಹಿತ ಕಾಯುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ವತಿಯಿಂದ ಸೆ.19ರಂದು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.

ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಉಪಪ್ರಧಾನ ಕಾರ್ಯದರ್ಶಿ ಹೆಚ್.ಬಿ.ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: