ಮೈಸೂರು

ಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ

ಅರಮನೆ ಆವರಣದಲ್ಲಿ ಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಸಾರ್ವಜನಿಕರಿಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಭಾನುವಾರದಿಂದಲೇ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಜಿಲ್ಲಾಧಿಕಾರಿ, ಅರಮನೆ ಆಡಳಿತ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಯೂ ಆಗಿರುವ ಡಿ.ರಂದೀಪ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಉಚಿತ ಪ್ರವೇಶ ನೀಡಲು ನಿರ್ಧರಿಸಿದ್ದಾರೆ.

ವಯಸ್ಕರಿಗೆ 20ರೂ. ಮತ್ತು ಮಕ್ಕಳಿಗೆ 10ರೂ.ಪ್ರವೇಶಶುಲ್ಕವನ್ನು ಈ ಹಿಂದೆ ನಿಗದಿಪಡಿಸಲಾಗಿತ್ತು. ಆದರೆ ಈಗ ಅದನ್ನು ಹಿಂದೆಗೆದುಕೊಳ್ಳಲಾಗಿದ್ದು, ಅರಮನೆಗೆ ಬರುವವರು ಉಚಿತವಾಗಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬ ನೋಡಿ ಮನ ತಣಿಸಿಕೊಳ್ಳಬಹುದು. ರಾತ್ರಿ 7ಗಂಟೆಯಿಂದ 8ರವರೆಗೆ ವಿದ್ಯುತ್ ದೀಪಾಲಂಕಾರವೂ ಇರಲಿದೆ. ಹತ್ತು ದಿನಗಳ ಕಾಲ ನಡೆಯುವ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ದೊರಕಿದೆ.

Leave a Reply

comments

Related Articles

error: