ಮೈಸೂರು

ಕೊಡಗಿನಲ್ಲಿ  ಅತಿವೃಷ್ಟಿಯಿಂದ ಹಾನಿ : ಹೆಚ್ಚಿನ ಹಣ ಬಿಡುಗಡೆಗೆ ಕೇಂದ್ರ ಗೃಹ ಸಚಿವರಿಗೆ ಮನವಿ

ಮೈಸೂರು,ಸೆ.18:- ಕೇಂದ್ರ ಗೃಹ ಸಚಿವರಾದ  ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ಕೊಡಗು  ಜಿಲ್ಲಾ ಉಸ್ತುವಾರಿ ಸಚಿವ  ಸಾ.ರಾ.ಮಹೇಶ್, ಶಾಸಕ  ಎಂ.ಪಿ.ಅಪ್ಪಚ್ಚು ರಂಜನ್,    ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ  ಸುನಿಲ್ ಸುಬ್ರಮಣಿ ಇತರರೊಂದಿಗೆ ಭೇಟಿ ಮಾಡಿ ಕೊಡಗು ಜಿಲ್ಲೆಯಲ್ಲಿ ಕಳೆದ ತಿಂಗಳು ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಕೂಡಲೇ ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ಕೋರಲಾಯಿತು .

ಈಗಾಗಲೇ ಕೇಂದ್ರ ತಂಡವು ಪ್ರಕೃತಿ ವಿಕೋಪ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಕ್ಷಣವೇ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.  ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿಗಳಾದ  ನರೇಂದ್ರ ಮೋದಿ ಜಿ  ಅವರೊಂದಿಗೆ ಚರ್ಚಿಸಿ ಹಣ ಬಿಡುಗಡೆ ಮಾಡಲಾಗುವುದು ಎಂದು  ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: