ಕರ್ನಾಟಕಪ್ರಮುಖ ಸುದ್ದಿ

ಭಿನ್ನಮತ -ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ದೆಹಲಿಗೆ ಹೊರಟ ಕೈ ನಾಯಕರು

ಬೆಂಗಳೂರು (ಸೆ.19): ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಮತ್ತು ಶಾಸಕರ ಅತೃಪ್ತಿ ಶಮನಗೊಳಿಸಲು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದು, ಇಂದು ಕೈ ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಸಂಬಂಧ ಸ್ಪಷ್ಟ ನಿಲುವು ತಾಳುವ ಸಾಧ್ಯತೆ ಇದೆ.

ಮಾಜಿ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರುಗಳು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರನ್ನು ಬೇಡಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಇಂದು ಚರ್ಚೆ ನಡೆಸಲಿದ್ದು, ಜಾರಕಿಹೊಳಿ ಸಹೋದರರ ಸಮಸ್ಯೆ ಪರಿಹಾರಕ್ಕೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. (ಎನ್.ಬಿ)

Leave a Reply

comments

Related Articles

error: