ಮೈಸೂರು

ಸೆ.23ರಂದು ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ : ನಿವೃತ್ತ ನೌಕರರ ಸನ್ಮಾನ

ಮೈಸೂರು,ಸೆ.19 : ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಹಳೆ ಮೈಸೂರು ಪ್ರಾಂತ್ಯದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮವನ್ನು ಸೆ.23ರ ಬೆಳಗ್ಗೆ 10.30ಕ್ಕೆ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಸಲಹೆಗಾರ ಕೆ.ಸೋಮಶೇಖರ್ ತಿಳಿಸಿದರು.

ಬುಧವಾರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಮಳವಳ್ಳಿ ತಾಲ್ಲೂಕಿನ ಅಯ್ಯನ ಸರಗೂರು ಮಠದ ಶ್ರೀ ಚನ್ನಸ್ವಾಮಿ ಉಪಸ್ಥಿತಿತರಿರುವರು. ಸಚಿವ ಸಿ.ಪುಟ್ಟರಂಗ ಶೆಟ್ಟಿ ಉದ್ಘಾಟಿಸಲಿದ್ದಾರೆ. ಡಾ.ಕೆ.ಅಜಯ್ ಕುಮಾರ್ ಅಧ್ಯಕ್ಷತೆ. ಡಿ.ವೈ.ಉಪ್ಪಾರ ಪ್ರತಿಷ್ಠಾನದ ಅಧ್ಯಕ್ಷ ಶರಣ್ ಡಿ ಬಂಡಿ ಭಗೀರಥರ ಭಾವಚಿತ್ರ ಆನಾವರಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾ ಉಪ್ಪಾರ ಸಂಘದ ಗೌರವಾಧ್ಯಕ್ಷ ಹನುಮಂತಶೆಟ್ಟಿ, ಕಾರ್ಯಾಧ್ಯಕ್ಷ ಪಿ.ಎಸ್.ವಿಷಕಂಠಯ್ಯ, ಜಿ.ಪಂ. ಸದಸ್ಯೆ ಲತಾ ಸಿದ್ಧಶೆಟ್ಟರು ಹಾಜರಿರಲಿದ್ದು, ಉಪನ್ಯಾಸಕ ಕೆ.ಸೋಮಶೇಖರ್ ಮುಖ್ಯ ಭಾಷಣಕಾರರಾಗಿರುವರು. ಇದೇ ಸಂದರ್ಭದಲ್ಲಿ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ಪಿಯುನ  250 ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಇವರೊಂದಿಗೆ ಉದಯೋನ್ಮುಖ ಚಲನಚಿತ್ರನಟಿ ಧರಣಿ ಹಾಗೂ ಸಚಿವ ಪುಟ್ಟರಂಗಶೆಟ್ಟಿಯವರನ್ನು ಸನ್ಮಾನಿಸಲಾಗುವುದು. ಚಾಮರಾಜನಗರದ ಬಿ.ಎಂ.ಶ್ವೇತ ಎಂಬ ವಿದ್ಯಾರ್ಥಿನಿಗೆ ಭಗೀರಥ ವಿದ್ಯಾಶ್ರೀ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಹಾಜರಿರಲಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷ ಡಾ.ಕೆ.ಅಜಯ್ ಕುಮಾರ್, ಉಪಾಧ್ಯಕ್ಷ ಮಾದಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ಇತರರು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: