ಕರ್ನಾಟಕಪ್ರಮುಖ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಸ್ಪರ್ಧೆ ಇಲ್ಲ!?

ಬೆಂಗಳೂರು (ಸೆ.19): ಕೆಲವು ದಿನಗಳಿಂದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದಿರುವ ಕಾರಣ ಈ ಬಾರಿಯ ಲೋಕಭಾ ಚುನಾವಣೆಗೆ ಸ್ಪರ್ಧೆ ಮಾಡದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಈ ಬಗ್ಗೆ ಕೇಂದ್ರ ಬಿಜೆಪಿ ನಾಯಕರಿಗೆ ಮನದಟ್ಟು ಮಾಡಿದ್ದಾರೆ ಎನ್ನಲಾಗಿದ್ದು, ಒಂದು ವೇಳೆ ತಾವು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡದೇ ಹೋದ ಪಕ್ಷದಲ್ಲಿ ತಮ್ಮ ಬದಲಿಗೆ ನಮ್ಮ ಕುಟುಂಬದವರಿಗೆ ಟಿಕೇಟ್ ನೀಡುವುದು ಬೇಡ, ಬದಲಿಗೆ ಬೇರೆಯವರಿಗೆ ಟಿಕೇಟ್ ನೀಡಲಿ. ನಾನು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವೆ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈಗ ಲಂಡನ್‍ನಲ್ಲಿರುವ ಸಂಬಂಧಿಕರ ಮನೆಗೆ ತೆರಳಿರುವ ಅನಂತ್ ಕುಮಾರ್, ಅಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ, ಆದರೂ ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅನಂತ್ ಕುಮಾರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದೆ. (ಎನ್.ಬಿ)

Leave a Reply

comments

Related Articles

error: