ಮೈಸೂರು

ಭಾರತ್ ವಿಕಾಸ ಪರಿಷತ್‍ನ ಸಮೂಹಗಾಯನ ಸ್ಪರ್ಧೆಯಲ್ಲಿ ವಿಜಯ ವಿಠ್ಠಲ ವಿದ್ಯಾರ್ಥಿಗಳ ಸಾಧನೆ

ಮೈಸೂರು,ಸೆ.19-ವಿಜಯ ವಿಠಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾರತ್ ವಿಕಾಸ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ, ಮಂಡ್ಯದ ಭಾರತ್ ವಿಕಾಸ ಪರಿಷತ್ ವಿಶ್ವಮಾನವ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಾಂತ ಮಟ್ಟದ ರಾಷ್ಟ್ರೀಯ ಸಮೂಹಗಾಯನ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

‘ಕನ್ನಡ ದೇಶಭಕ್ತಿಗೀತೆ ಮತ್ತು ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮತ್ತು ಸಂಸ್ಕೃತ ಮತ್ತು ಹಿಂದಿ ದೇಶಭಕ್ತಿ ಗೀತೆ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನಗಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. ಚಿತ್ರದಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಚಾರ್ಯ ಎಚ್.ಸತ್ಯಪ್ರಸಾದ್, ಇಂಗ್ಲಿಷ್ ಉಪನ್ಯಾಸಕಿ ಮಯೂರಲಕ್ಷ್ಮಿ ಮತ್ತು ಸಂಗೀತ ಶಿಕ್ಷಕ ಸುಜಲಾ ಗೋರೆ ಅವರನ್ನು ಕಾಣಬಹುದು. (ಎಂ.ಎನ್)

 

Leave a Reply

comments

Related Articles

error: