ಮೈಸೂರು

ಸೆ.21ರಂದು ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಬದುಕು ಬರಹ ಕುರಿತ ‘ಸಾಹಿತ್ಯ ಸಂಜೆ’

ಮೈಸೂರು,ಸೆ.19 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾಕೂಟ ಸಂಯುಕ್ತಾಶ್ರಯದಲ್ಲಿ ಸೆ.21ರಂದು ಸಂಜೆ 5 ಗಂಟೆಗೆ ಅರಮನೆ ಉತ್ತರದ್ವಾರದಲ್ಲಿರುವ ಕಸಾಪ ಸಭಾಂಗಣದಲ್ಲಿ  ಗೊರೂರು ರಾಮಸ್ವಾಮಿ ಅಯ್ಯಂಗಾರ್ ಬದುಕು ಬರಹ ಕುರಿತಾದ ‘ಸಾಹಿತ್ಯ ಸಂಜೆ’ಯನ್ನು ಏರ್ಪಡಿಸಲಾಗಿದೆ.

ಹಿರಿಯ ಸಾಹಿತಿ ಡಾ.ಮಳಲಿ ವಸಂತ ಕುಮಾರ್ ಉದ್ಘಾಟಿಸಲಿದ್ದಾರೆ. ಕಸಾಪ ಜಿಲ್ಲಾ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ. ಹಾಸನ ಎವಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಹೆಚ್.ಎಲ್.ಮಲ್ಲೇಶಗೌಡ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್ ಪ್ರಾಸ್ತಾವಿಕವಾಗಿ ನುಡಿಯಲಿದ್ದು, ಸಾಹಿತಿ ಡಾ.ಜಯಪ್ಪ ಹೊನ್ನಾಳಿ, ರಾಜಶೇಖರ ಕದಂಬ, ಮೂಗೂರು ನಂಜುಂಡಸ್ವಾಮಿ ಇರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: