ಪ್ರಮುಖ ಸುದ್ದಿ

ಕಾರಿನ ಹಿಂಭಾಗದ ಗಾಜು ಒಡೆದು 10ಲಕ್ಷರೂ.ನಗದು ದೋಚಿ ಪರಾರಿ

ರಾಜ್ಯ( ಬೆಂಗಳೂರು)ಸೆ.19:- ಕಾರಿನ ಹಿಂಭಾಗದ ಗಾಜು ಒಡೆದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ 10 ಲಕ್ಷ ರೂ. ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿರುವ ದುರ್ಘಟನೆ ಸಂಜಯನಗರ ಮುಖ್ಯರಸ್ತೆಯಲ್ಲಿ ನಡೆದಿದೆ.
ಹೆಬ್ಬಾಳದ ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ಅವರು ಕಳೆದ ಸೆಪ್ಟೆಂಬರ್ 17 ರಂದು ಮಧ್ಯಾಹ್ನ  ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಡ್ರಾ ಮಾಡಿಕೊಂಡು ಸ್ನೇಹಿತನ ಜೊತೆ ಮನೆಗೆ ಕಾರಿನಲ್ಲಿ ಬರುತ್ತಿದ್ದರು.
ಮಾರ್ಗ ಮಧ್ಯೆ ಸಂಜಯನಗರದ ಮುಖ್ಯ ರಸ್ತೆಯಲ್ಲಿ ಕಾರು ನಿಲ್ಲಿಸಿ ಸ್ನೇಹಿತನ ಜೊತೆ ಹೋಟೆಲ್‌ನಲ್ಲಿ ಟೀ ಕುಡಿಯಲು ಹೋಗಿದ್ದಾಗ ಹೊಂಚು ಹಾಕಿದ್ದ ದುಷ್ಕರ್ಮಿಗಳು ಕಾರಿನ ಹಿಂಭಾಗದ ಗಾಜು ಒಡೆದು 10 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ.
ರಾಜಶೇಖರ್ ಅವರು ಬ್ಯಾಂಕಿಗೆ ಹೋಗಿ ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಹೋಗುತ್ತಿರುವುದನ್ನು ಗಮನಿಸಿ ಹಿಂಬಾಲಿಸಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿರುವ ಶಂಕೆ ಇದೆ.
ಈ ಸಂಬಂಧ ಪ್ರಕರಣ ದಾಖಲಿಸಿರುವ ಸಂಜಯನಗರ ಪೊಲೀಸರು ಘಟನಾ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಬ್ಯಾಂಕಿನ ಬಳಿಯ ಸಿಸಿಟಿವಿ ಕ್ಯಾಮರಾದಲ್ಲಿನ ದೃಶ್ಯಾವಳಿಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: