ಪ್ರಮುಖ ಸುದ್ದಿಮೈಸೂರು

ಸ್ಯಾಟಲೈಟ್ ರೈಲ್ವೆ ಸ್ಟೇಷನ್ ಕಾಮಗಾರಿ ವೀಕ್ಷಿಸಿದ ಸಚಿವ ಜಿ.ಟಿ.ದೇವೇಗೌಡ-ಸಂಸದ ಪ್ರತಾಪ್ ಸಿಂಹ

ಸಿಎಂ ದಂಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಜಿ.ಟಿ. ದೇವೇಗೌಡ

ಮೈಸೂರು,ಸೆ.21;- ಮೈಸೂರಿನ ನಾಗನಹಳ್ಳಿ ಸ್ಯಾಟಲೈಟ್ ರೈಲ್ವೆ ಸ್ಟೇಷನ್ ಕಾಮಗಾರಿ ನಡೆಯುತ್ತಿರುವ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಂಸದ ಪ್ರತಾಪ್ ಸಿಂಹ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೂಡಿ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

ಇದೇ ವೇಳೆ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ರೈತರೊಡನೆ ಸಚಿವ ಜಿ.ಟಿ ದೇವೇಗೌಡ ಸಭೆ ನಡೆಸಿ ನಾಗನಹಳ್ಳಿಯ ಸೆಟಲೈಟ್ ರೈಲು ನಿಲ್ದಾಣದ ಕಾಮಗಾರಿ ಬಗ್ಗೆ ನಾಗನಹಳ್ಳಿ‌ ರೈತರಿಗೆ ಮಾಹಿತಿ  ನೀಡಿದರು. ಈ ವೇಳೆ ಮಾಹಿತಿ ನೀಡಿದ ಸಂಸದ ಪ್ರತಾಪ್ ಸಿಂಹ,  400 ಹೆಕ್ಟೇರ್ ಗೂ ಹೆಚ್ಚು ಜಮೀನು ಬೇಕು. ಈಗಾಗಲೇ ಡಿಪಿಆರ್ ನಡೆಯುತ್ತಿದೆ. ಮಾರ್ಚ್ ಒಳಗೆ ಕಾಮಗಾರಿಗೆ ಚಾಲನೆ ನೀಡಲಿದ್ದೇವೆ ಎಂದು ಹೇಳಿದರು.

ಈ ಸಂದರ್ಭ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು,ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹಾಗೂ ರೈತರು ಉಪಸ್ಥಿತರಿದ್ದರು.

ಸಿಎಂ ದಂಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಜಿ.ಟಿ. ದೇವೇಗೌಡ

ವಿರೋಧ ಪಕ್ಷದ ವಿರುದ್ಧ ರಾಜ್ಯದಲ್ಲಿ ಜನ ದಂಗೆ ಏಳಬೇಕೆನ್ನುವ ಸಿಎಂ ಹೇಳಿಕೆ ವಿಚಾರಕ್ಕೆ ಸಮಬಂಧಿಸಿದಂತೆ ಮಾಧ್ಯಮದ ಪ್ರಶ್ನೆಗೆ ಸಿಎಂ ಅವರನ್ನು ಸಮರ್ಥಿಸಿಕೊಂಡ ಸಚಿವ ಜಿ.ಟಿ ದೇವೇಗೌಡ,  ರಾಜ್ಯದಲ್ಲಿ ಬಿಜೆಪಿ ಅಧಿಕಾರ ಮಾಡಲು ಬಿಡುತ್ತಿಲ್ಲ. ಒಂದು ಕಡೆ ಭೀಕರ ಬರಗಾಲ, ಮತ್ತೊಂದು ಕಡೆ ನೆರೆ ಇದೆ. ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿಗೆ ತೊಂದರೆ ಮಾಡುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಅಧಿಕಾರ ನಡೆಸಲು ಅವಕಾಶ ಮಾಡಿ ಕೊಡಬೇಕು ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಬೇರೆ ಯಾವುದೇ ಉದ್ದೇಶದಿಂದ ಈ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದೇ ವೇಳೆ ಸಂಸದ ಪ್ರತಾಪ್ ಸಿಂಹ  ದಂಗೆ ರಾಜಕಾರಣದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಹೇಳಿಕೆಗಳಿಂದ ಏನೂ ಆಗಲ್ಲ. ಕಡೆಗೆ ಜನ ಏನು ಕೆಲಸ ಮಾಡಿದ್ದೀರಿ ಅಂತ ಕೇಳ್ತಾರೆ.ಹೀಗಾಗಿ ನಾನು ಕ್ಷೇತ್ರದ ಕೆಲಸ ಕಾರ್ಯಗಳ ಬಗ್ಗೆ ಹೆಚ್ಚು ಗಮನ ಹರಿಸಿದ್ದೇನೆ. ಸದ್ಯ ರಾಜಕಾರಣ ಮಾತನಾಡಲ್ಲ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: