ಪ್ರಮುಖ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭೇಟಿ : ಮಹತ್ವದ ಚರ್ಚೆ

ರಾಜ್ಯ(ಬೆಂಗಳೂರು)ಸೆ.21:- ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು  ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದರು.

ಬೆಂಗಳೂರಿನ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ  ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದರು.  ಈ ವೇಳೆ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್‌, ಸಚಿವ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರು ಭಾಗಿಯಾಗಿದ್ದರು ಎನ್ನಲಾಗಿದೆ.

ಆಪರೇಷನ್‌ ಕಮಲ ಭೀತಿ, ದಂಗೆ ಹೇಳಿಕೆಗಳ ಬಳಿಕ ದಿಢೀರ್‌ ಆಗಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.  ಸಭೆಯಲ್ಲಿ ಸೆಳೆಯಲೆತ್ನಿಸುವ ಶಾಸಕರನ್ನು ಹಿಡಿದಿಟ್ಟಿಕೊಳ್ಳಲು ಕ್ರಮ, ಮುಂತಾದ  ರಣತಂತ್ರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೋಜನವನ್ನೂ ಸಿದ್ಧಪಡಿಸಲಾಗಿದ್ದು, ಬಿಜೆಪಿಯ ಕಾರ್ಯತಂತ್ರಕ್ಕೆ ಪ್ರತಿತಂತ್ರ ರೂಪಿಸಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: