ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ: ಯಡಿಯೂರಪ್ಪ ನಿವಾಸಕ್ಕೆ ಬಿಗಿ ಭದ್ರತೆ

ಬೆಂಗಳೂರು (ಸೆ.21): ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಇದ್ದಕ್ಕಿದ್ದಂತೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ನಿವಾಸಕ್ಕೆ ಭಾರೀ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಸದಾಶಿವನಗರ ಪೊಲೀಸ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆಯನ್ನು ಒದಗಿಸಲಾಗಿದೆ. ಯಾರೇ ಮನೆಗೆ ಬಂದರೂ ಬಿಗಿ ತಪಾಸಣೆ ನಡೆಸಿ ಒಳ ಬಿಡಲಾಗುತ್ತಿದೆ. ಮನೆಯ ಸುತ್ತಮುತ್ತ ಪೊಲೀಸರ ಜೊತೆಗೆ ಕೆಎಸ್‍ಆರ್‍ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಪೊಲೀಸರ ಅನುಮತಿಯಿಲ್ಲದೆ ಯಾರೊಬ್ಬರೂ ಪ್ರತಿಭಟನೆ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.

ನಿನ್ನೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ತದನಂತರ ಯಡಿಯೂರಪ್ಪನವರ ನಿವಾಸದ ಮುಂದೆ ಬ್ಯಾರಿಕೇಡ್‍ಗಳನ್ನು ಹಾಕಿದ್ದು, ಅಕ್ಕಪಕ್ಕದ ರಸ್ತೆಗಳಲ್ಲೂ ಪೊಲೀಸರ ಸರ್ಪಗಾವಲಿದೆ. ಅಪ್ಪಿತಪ್ಪಿಯೂ ಯಾರಾದರೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ವಶಕ್ಕೆ ಪಡೆಯುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: