ಸುದ್ದಿ ಸಂಕ್ಷಿಪ್ತ

ಶಿಕ್ಷಕರ ದಿನಾಚರಣೆ – ಸನ್ಮಾನ ನಾಳೆ

ಮೈಸೂರು,ಸೆ.21 : ಕನ್ನಡ ಸಾಹಿತ್ಯ ಪರಿಷತ್ತು, ರೋಟರಿ ಮಿಡ್ ಟೌನ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಳಿಲು ಸೇವಾ ಸಂಸ್ಥೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ಶಿಕ್ಷಕದ ದಿನಾಚರಣೆ ಹಾಗೂ ಸನ್ಮಾನ ಸಮಾರಂಭವನ್ನು ನಾಳೆ (22)ರ ಸಂಜೆ 6.30ಕ್ಕೆ ಪಿರಿಯಾಪಟ್ಟಣದ ರೋಟರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ರಾವಂದೂರು ಮುರುಘಾಮಠದ ಶ್ರೀಮೋಕ್ಷಪತಿ ಸ್ವಾಮೀಜಿ ಸಾನಿಧ್ಯ ವಹಿಸುವರು. ಶಾಸಕ ಕೆ.ಮಹದೇವ್ ಉದ್ಘಾಟಿಸುವರು. ರೋಟರಿ ಮಿಡ್ ಟೌನ್ ಅಧ್ಯಕ್ಷ ಅಂಬ್ಲಾರೆ ಬಸವೇಗೌಡ ಅಧ್ಯಕ್ಷತೆ. ಹಲವು ಗಣ್ಯರು ಭಾಗಿಯಾಗಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: