
ಪ್ರಮುಖ ಸುದ್ದಿ
ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಸೆ.25 ಮತ್ತು 26 ರಂದು ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ
ರಾಜ್ಯ(ಮಡಿಕೇರಿ) ಸೆ.21 : – ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ನಗರದ ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 15ನೇ ವಾರ್ಷಿಕೋತ್ಸವವು ಸೆ.25 ಮತ್ತು 26 ರಂದು ನಡೆಯಲಿದೆ.
ಸೆ.25 ರಂದು ಸಂಜೆ 6 ಗಂಟೆಗೆ ವಾರ್ಷಿಕೋತ್ಸವ ಕಾರ್ಯಕ್ರಮಗಳ ಆರಂಭ, ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.
ಸೆ.26 ರಂದು ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾ ಹೋಮ, ತತ್ವ ಹೋಮ, ತತ್ವ ಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭೀಷೆಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗವಾಗಲಿದೆ. ಮಧ್ಯಾಹ್ನ 12.30ಕ್ಕೆ ಅನ್ನದಾನ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ. (ಕೆಸಿಐ,ಎಸ್.ಎಚ್)