ಕ್ರೀಡೆದೇಶ

ಕ್ರೀಡಾ ಸಚಿವರನ್ನು ಭೇಟಿಯಾದ ಭಜರಂಗ್ ಪೂನಿಯಾ; ಖೇಲ್ ರತ್ನದ ಭರವಸೆ

ನವದೆಹಲಿ,ಸೆ.22-ಕುಸ್ತಿಪಟು ಭಜರಂಗ್ ಪೂನಿಯಾ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದ್ದು, ಪೂನಿಯಾ ಅವರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಪರಿಗಣಿಸುವ ಭರವಸೆ ನೀಡಿದ್ದಾರೆ.

ಕ್ರೀಡಾ ಸಚಿವರನ್ನು ಭೇಟಿಯಾದ ಪೂನಿಯಾ, ತಮ್ಮನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯಿಂದ ಕೈಬಿಟ್ಟಿದ್ದಕ್ಕೆ ಕಾರಣ ಕೇಳಿದ್ದಾರೆ. ಪ್ರಶಸ್ತಿ ಪಟ್ಟಿಯಿಂದ ನನ್ನ ಹೆಸರನ್ನು ಕೈಬಿಟ್ಟಿದ್ದಕ್ಕೆ ಸಚಿವರು ಕಾರಣ ನೀಡಿದ್ದಾರೆ. ಈ ಸಂಬಂಧ ಮರು ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ ಎಂದು ಭಜರಂಗ್‌ ಹೇಳಿದ್ದಾರೆ.

ಆದರೆ ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಪ್ರಶಸ್ತಿ ಪಟ್ಟಿಗೆ ಸೇರಿಸುವ ಸಾಧ್ಯತೆ ತೀರಾ ಕಡಿಮೆ ಎಂದು ಕ್ರೀಡಾ ಸಚಿವಾಲಯದ ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಿಸಿತ್ತು. ಇದರ ಬೆನ್ನಲ್ಲೇ ಭಜರಂಗ್ ಪೂನಿಯಾ ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಗೆ ನೀಡಿದ್ದರು. (ಎಂ.ಎನ್)

Leave a Reply

comments

Related Articles

error: