ಮೈಸೂರು

ಹಿಂದುಳಿದ ಸಮುದಾಯದವರು ಮಕ್ಕಳನ್ನು ವಿದ್ಯಾವಂತರನ್ನಾಗಿಸಿ: ಡಿ.ಧ್ರುವಕುಮಾರ್ ಸಲಹೆ

ಸಮಾಜದಲ್ಲಿರುವ ಕೀಳರಿಮೆ ಹೋಗಲಾಡಿಸುವ ನಿಟ್ಟಿನಲ್ಲಿ ಹಿಂದುಳಿದ ಸಮುದಾಯದವರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಬೇಕು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಿ.ಧ್ರುವಕುಮಾರ್ ಸಲಹೆ ನೀಡಿದರು.

ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಸವಿತಾಸಂಘದ ವತಿಯಿಂದ ಆಯೋಜಿಸಲಾದ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ ಮತ್ತು ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಡಿ.ಧ್ರುವಕುಮಾರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಹಿಂದುಳಿದ ಸಮುದಾಯದವರು ರಾಜಕೀಯವಾಗಿ ಮುಂದೆ ಬಂದಾಗ ಮಾತ್ರ ಆ ಸಮುದಾಯಗಳ ಅಭಿವೃದ್ಧಿ ಸಾಧ್ಯ.  ಕಾಂಗ್ರೆಸ್ ಪಕ್ಷ ಮಾತ್ರ ಹಿಂದುಳಿದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ ಎಂದರು. ನಗರದಲ್ಲಿ ಸವಿತಾ ಸಮಾಜ ಕಟ್ಟಡ ನಿರ್ಮಾಣಕ್ಕೆ ಸಿ.ಎ. ನಿವೇಶನವನ್ನು ಮೂರು ತಿಂಗಳೊಳಗೆ ನೀಡಲಾಗುವುದು ಎಂದು ತಿಳಿಸಿದರು.

ಡಾ. ತಿಮ್ಮಯ್ಯ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ನಿವೃತ್ತ ಅಧಿಕಾರಿಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸವಿತಾ ನೌಕರರ ಸಂಘದ ಬೆಂಗಳೂರು ಘಟಕದ ಉಪಾಧ್ಯಕ್ಷ ಜಿ.ಶಿವಮೂರ್ತಿ, ವೆಂಕಟಾಚಲಪತಿ, ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: