ಮೈಸೂರು

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಜೆಎಸ್ ಎಸ್ ನ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಆಯ್ಕೆ

ಮೈಸೂರು,ಸೆ.22:-  ಸುತ್ತೂರು ಜೆಎಸ್ ಎಸ್ ನ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮೈಸೂರು ಚಾಮುಮಡಿವಿಹಾರ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುತ್ತೂರು ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯ ಅಶೋಕ ಪ್ರಭುಗೌಡ 600ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4*100ರಿಲೇ ಓಟದಲ್ಲಿ ಪ್ರಭುಗೌಡ, ಬೋಝಪ್ಪ, ರವಿ, ರಾಹುಲ್ ಕುಮಾರ್ ಮೆಹತೋ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇವರನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎಂ.ಸಿದ್ದಪ್ಪ, ಜಿ.ಎಂ.ಷಡಕ್ಷರಿ, ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರುಗಳು ಅಭಿನಂದಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: