ಮೈಸೂರು

ಯುವಜನೋತ್ಸವ: ವಿಜೇತರಿಗೆ ಬಹುಮಾನ ವಿತರಣೆ

ಮೈಸೂರಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ವಿಜೇತರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಭವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಯುವಜನೋತ್ಸವದಲ್ಲಿ ಏಕಾಂಕ ಸ್ಪರ್ಧೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗೋವಿಂದದಾಸ ಕಾಲೇಜು ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ.

ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾದವರು ಜನವರಿಯಲ್ಲಿ ಹರಿಯಾಣದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: