ಸುದ್ದಿ ಸಂಕ್ಷಿಪ್ತ

ವಿವಿಧ ಚಟುವಟಿಕೆಗಳ ಉದ್ಘಾಟನೆ.24.

ಮೈಸೂರು,ಸೆ.22 : ವಿಜಯನಗರದ 4ನೇ ಹಂತದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಕ್ರೀಡಾ. ಎನ್.ಎಸ್.ಎಸ್, ಎಸ್.ಸಿ.ಸಿ. ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಸೆ.24ರ ಮಧ್ಯಾಹ್ನ 1 ಗಂಟೆಗೆ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಡಾ.ಹೆಚ್.ವೈ.ಶ್ರೀಶಕುಮಾರ್, ನಿವೃತ್ತ ಪ್ರಾಂಶುಪಾಲ ಪ್ರೊ.ಎಚ್.ಬಿ.ಮಲ್ಲಿಕಾರ್ಜುನಸ್ವಾಮಿ, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರೊ.ಮೈಸೂರು ಕೃಷ್ಣಮೂರ್ತಿ ಹಾಜರಿರಲಿದ್ದು, ಸ.ಮ.ಪ್ರ.ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕೆ.ಸತೀಶ್ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: